ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಕೆಟ್ ಡೇ ಕಾರ್ಯಕ್ರಮ

ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಕೆಟ್ ಡೇ ಕಾರ್ಯಕ್ರಮ

Mon, 05 Dec 2022 02:25:09  Office Staff   S.O. News Service

ಭಟ್ಕಳ:ವಿದ್ಯಾರ್ಥಿಗಳಿಗೆ ವ್ಯವಹಾರದ ಜ್ಞಾನವನ್ನು ಪ್ರಾಯೋಗಿಕವಾಗಿ ಕಲಿಸುವ ನಿಟ್ಟಿನಲ್ಲಿ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ  'ಮಾರ್ಕೆಟ್ ಡೇ' ಕಾರ್ಯಕ್ರಮವನ್ನು ಆರ್.ಎನ್.ಎಸ್. ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ  ದಿನೇಶ ಗಾಂವಕರ್ ಉದ್ಘಾಟಿಸಿದರು. 

ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ತಂಡವನ್ನು ರಚನೆ ಮಾಡಿಕೊಂಡು ತಮ್ಮ ಅಭಿರುಚಿಗೆ ತಕ್ಕಂತೆ ಅಂಗಡಿಗಳನ್ನು ತೆರೆದು, ಸಣ್ಣ ಬಂಡವಾಳವನ್ನು ಹೂಡಿ ಲಾಭ ಪಡೆಯುವ ಭಾವನಾತ್ಮಕ ಸಾಮಾಜಿಕ ಸಂಬಂಧಗಳ ಮೌಲ್ಯವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಾಧವ ಪಿ. ವಹಿಸಿದ್ದರು. 

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪದವಿ ಕಾಲೇಜಿನ ಪ್ರಾಚಾರ್ಯ ಡಾ|| ಸಂಜಯ ಕೆ.ಎಸ್ ಪ್ರಾಮಾಣಿಕತೆ ಹಾಗೂ ಶೃದ್ಧೆಯಿಂದ ದುಡಿದರೆ ಯಶಸ್ಸು ತಮ್ಮ ಕಡೆ ಬಂದೇ ಬರುತ್ತದೆ ಎಂದರು. ಅಶ್ವಿನಿ ಶೇಟ್ ಕಾರ್ಯಕ್ರಮ ನಿರ್ವಹಿಸಿದರು.


Share: