ಉಡುಪಿ : ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 10 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ.
ಸ್ಪರ್ಧೆಗಳ ವಿವರ:
ಪುರುಷರಿಗೆ: ಅಥ್ಲೆಟಿಕ್ಸ್, ತ್ರೋಬಾಲ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಶಟ್ಲ್ ಬ್ಯಾಡ್ಮಿಂಟನ್, ಬಾಸ್ಕೆಟ್ಬಾಲ್, ಟೇಬಲ್ ಟೆನ್ನಿಸ್, ಫುಟ್ಬಾಲ್, ಹ್ಯಾಂಡ್ಬಾಲ್, ಕುಸ್ತಿ ಹಾಗೂ ಹಾಕಿ ಪಂದ್ಯಗಳು ನಡೆಯಲಿದೆ.
ಮಹಿಳೆಯರಿಗೆ: ಅಥ್ಲೆಟಿಕ್ಸ್, ತ್ರೋಬಾಲ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಶಟ್ಲ್ ಬ್ಯಾಡ್ಮಿಂಟನ್, ಬಾಸ್ಕೆಟ್ಬಾಲ್, ಟೇಬಲ್ ಟೆನ್ನಿಸ್, ಹ್ಯಾಂಡ್ಬಾಲ್, ಕುಸ್ತಿ ಹಾಗೂ ಹಾಕಿ ಪಂದ್ಯಗಳು ನಡೆಯಲಿದೆ.
ಸೆ. 8 ರಂದು ಶಟ್ಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಗಳು ಒಳಾಂಗಣ ಕ್ರೀಡಾಂಗಣದಲ್ಲಿ ಹಾಗೂ ಸೆ.10 ರಂದು ನೆಟ್ಬಾಲ್, ಟೆನ್ನಿಸ್ ಹಾಗೂ ಈಜು ಸ್ಪರ್ಧೆಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಕ್ರೀಡಾಪಟುಗಳು ನಿಗಧಿತ ದಿನಾಂಕದಂದು ಬೆಳಗ್ಗೆ 9 ಗಂಟೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.