ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉಡುಪಿ ಜಿಲ್ಲೆ ರಜತ ಮಹೋತ್ಸವ ಸಮಾರಂಭ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಉದ್ಘಾಟನೆ

ಉಡುಪಿ ಜಿಲ್ಲೆ ರಜತ ಮಹೋತ್ಸವ ಸಮಾರಂಭ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಉದ್ಘಾಟನೆ

Sat, 27 Aug 2022 04:36:46  Office Staff   SO News

ಉಡುಪಿ : ಜಿಲ್ಲಾಡಳಿತದ ವತಿಯಿಂದ, ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ ರಜತ ಮಹೋತ್ಸವ  ಸಮಾರಂಭವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಿದರು.

ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.
   ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ,  ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್,  ವಿಧಾನಪರಿಷತ್ ಶಾಸಕ ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ,  ಮತ್ತಿತರರು ಭಾಗವಹಿಸಿದ್ದರು.


Share: