ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆ . ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆ . ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ

Wed, 16 Aug 2023 02:52:54  Office Staff   SO News

ಉಡುಪಿ :  ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಿ ಹೆಬ್ಬಾಳ್ವರ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರೋತ್ಸವ ಸಂದೇಶ ನೀಡಿದರು.

ಪೊಲೀಸ್, ಕರಾವಳಿ ಕಾವಲು ಪಡೆ, ಅಗ್ನಿ ಶಾಮಕ, ಗೃಹ ರಕ್ಷಕ, ಅಬಕಾರಿ ಅರಣ್ಯ ಮತ್ತು ಕಾಲೇಜು ಎನ್.ಸಿ.ಸಿ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

 ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂದ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ಡ್ರೈಲ್ ಕಿಟ್ ವಿತರಣೆ,ಶ್ರವಣದೋಷವುಳ್ಳ ವ್ಯಕ್ತಿಗಳಗ ಸ್ವಯಂ ಉದ್ಯೋಗಕ್ಕಾಗಿ ಹೂಅಗೆ ಯಂತ್ರ ವಿತರಣೆ, ಹೊಸದಾಗಿ ಗುರುತಿಸಿದ ಎಂಡೋಸಲ್ಫಾನ್ ಬಾಧಿತರಿಗೆ ಮಾಸಾಶನ ಪ್ರಮಾಣ ಪತ್ರ ವಿತರಣೆ, ತೋಟಗಾರಿಕಾ ಇಲಾಖೆಯಿಂದ ರಾಷ್ಟ್ರೀಯ ಖಾದ್ಯ ತೈಲ ಯೋಜನೆಯಡಿ ರೈತರಿಗೆ ತಾಳ ಸಸಿ ವಿತರಣೆ ನಡೆಯಿತು.
 ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಆಸ್ಪತ್ರೆಗಳಿಗ ಪ್ರಮಾಣಪತ್ರ ವಿತರಿಸಲಾಯಿತು.
ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮಸೇವೆ ಸಲ್ಲಿಸಿ ರಾಷ್ಟ್ರಪತಿ ಪದಕ, ಮುಖ್ಯಮಂತ್ರಿ ಪದಕ ಪಡೆದವರಿಗೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು. ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 4 ಮಂದಿ ಫಲಾನುಭವಿಗಳಿಗೆ ದ್ವಿ ಚಕ್ರ ವಾಹನ ವಿತರಿಸಲಾಯಿತು.

ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಡುಪಿ ಶಾಸಕ ಯಶಾಲ್ ಸುವರ್ಣ, ಕಾಪು ಶಾಸಕ ಗುರ್ಮ ಸುರೇಶ್ ಶೆಟ್ಟಿ  ಜಿಲ್ಲಾಧಿಕಾರಿ  ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹಚ್.. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್  ವಂದಿಸಿದರು. ಕುದಿ ವಸಂತ ಶೆಟ್ಟಿ ನಿರೂಪಿಸಿದರು.


Share: