ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಉಡುಪಿ ಶಾಲಾಕಾಲೇಜುಗಳಿಗೆ ಗುರುವಾರವೂ ರಜೆ.

ಉಡುಪಿ ಶಾಲಾಕಾಲೇಜುಗಳಿಗೆ ಗುರುವಾರವೂ ರಜೆ.

Thu, 27 Jul 2023 03:53:46  Office Staff   SO News

ಉಡುಪಿ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣಕ್ಕೆ   ಜಿಲ್ಲೆಯಲ್ಲಿ ಜುಲೈ 27ರಂದು (ಗುರುವಾರ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಿದ ಬೆನ್ನಲ್ಲೇ  ಹೆಚ್ಚು ಮಳೆಯಾಗುತ್ತಿದೆ. ಹೀಗಾಗಿ ಜುಲೈ 27 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಣೆ ಮಾಡಿಲ್ಲ.


Share: