ಕಾರವಾರ : ಪ್ರಸ್ತುತ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಉತ್ತರಕನ್ನಡ ಜಿಲ್ಲೆ ಈ ಬಾರಿ ಶೇ.74.33 ಫಲಿತಾಂಶದೊಂದಿಗೆ ಐದನೇ ಸ್ಥಾನ ಪಡೆದುಕೊಂಡಿದೆ.
ಜಿಲ್ಲೆಯಲ್ಲಿ ಈ ಬಾರೀ ಒಟ್ಟು 15,317 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 10,353 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಯುವತಿಯರೇ ಮೇಲುಗೈ ಸಾಧಿಸಿದ್ದಾರೆ.
ಸರಕಾರಿ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿಯೇ ಉತ್ತಮ ಫಲಿತಾಂಶ ಬಂದಿದೆ. ಗ್ರಾಮೀಣ ಭಾಗದವರಿಗಿಂತ ನಗರ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.