ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕರಾವಳಿಯ ಪ್ರಭಾವಿ ಮುಖಂಡ ಯು ಆರ್ ಸಭಾಪತಿ ನಿಧನ.

ಕರಾವಳಿಯ ಪ್ರಭಾವಿ ಮುಖಂಡ ಯು ಆರ್ ಸಭಾಪತಿ ನಿಧನ.

Mon, 22 May 2023 00:23:49  Office Staff   SO News

ಉಡುಪಿ : ಕರಾವಳಿ ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕರಾದ ಯು. ಆರ್. ಸಭಾಪತಿ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಕೆಲ ದಿನಗಳಿಂದ ಅನಾರೋಗ್ಯಕ್ಕಿಡಾಗಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು.  ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 

ಸಿಎಂ ಸಿದ್ದರಾಮಯ್ಯ ಸಂತಾಪ : ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಯು.ಆರ್.ಸಭಾಪತಿ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಸಭಾಪತಿ ಅವರ ನಿಧನದಿಂದ ಕರಾವಳಿಯ ಕಾಂಗ್ರೆಸ್ ಹಿಂದುಳಿದ ಸಮುದಾಯಕ್ಕೆ ಸೇರಿದ ಜನಪ್ರಿಯ ನಾಯಕನನ್ನು ಕಳೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

1989ರಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಯು ಆರ್ ಸಭಾಪತಿ  ಒಮ್ಮೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆ ಬಳಿಕ ಕರಾವಳಿ ಭಾಗದ ಪ್ರಬಲ ಶಾಸಕರಾಗಿ ಅವರು ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ನಾಡಿನ ವಿವಿಧ  ಗಣ್ಯರು, ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.


Share: