ಕಾರವಾರ : ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ವಿವಿಧ ನ್ಯಾಯಾಲಯ ಪ್ರಕರಣ ಮತ್ತು ಕಡತಗಳಿಗೆ ಕಾನೂನು ಸಲಹೆ ನೀಡಲು ಕಾನೂನು ಪದವೀಧರರಾಗಿರುವ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸೆ.15 ರೊಳಗೆ ಅರ್ಜಿ ಹಾಗೂ ಬಯೋಡಾಟಾದೊಂದಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08382-226406, 226471 ಗೆ ಸಂಪರ್ಕಿಸಿ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.