ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯ ಕಾರಗದ್ದೆ ಹುರುಳಿಗೊಂಡರಕೇರಿಯ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಶವವೊಂದು ಅಸ್ಥಿ ಪಂಜರದ ರೂಪದಲ್ಲಿ ಪತ್ತೆಯಾಗಿದೆ.
ಸುಮಾರು 40 ರಿಂದ 50 ವರ್ಷದ ಆಸುಪಾಸಿನ ವ್ಯಕ್ತಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಸಾವನ್ನಪ್ಪಿರಬಹುದು ಎಂದು ಶಕಿಸಲಾಗಿದ್ದು ಶವ ಕೊಳೆತು ಅಸ್ಥಿ ಪಂಜರ ರೂಪದಲ್ಲಿ ಪತ್ತೆಯಾಗಿದೆ. ಸರ್ಕಾರಿ ಹಾಡಿ ಜಾಗದಲ್ಲಿ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಗ್ರಾಮೀಣ ಠಾಣೆಯ ಸಿಪಿಐ ಮಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಭರತ್, ಹಾಗೂ ಸಿಬ್ಬಂದಿಗಳಾದ ದೀಪಕ್, ಚಂದ್ರಕಾಂತ್ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.