ಕಾರವಾರ: 2023-24 ಸಾಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಬ್ಯೂಟಿ ಪಾರ್ಲರ್, ಗೌಂಡಿ ಕೆಲಸ, ಜನರಲ್ ಇಂಜಿನಿಯರಿಂಗ್ ಕೆಲಸ, ಕಾರ್ಪೇಂಟರಿ ಕೆಲಸದ ಉಪಕರಣಗಳನ್ನು ಉಚಿತವಾಗಿ ವಿತರಣೆ ಮಾಡುವ ಯೋಜನೆಯಿದ್ದು, 18 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ ಕೈಗಾರಿಕೆ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.