ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ : ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಕಾರವಾರ : ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Tue, 05 Jul 2022 21:03:32  Office Staff   S O news

ಕಾರವಾರ : ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 2022-23 ನೇ ಸಾಲಿಗೆ ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರ್ಹ ಸಹ ಶಿಕ್ಷಕರು, ವಿಶೇಷ ಶಿಕ್ಷಕರು, ಮುಖ್ಯ ಶಿಕ್ಷಕರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಜು. 15 ರೊಳಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂತರ್ಜಾಲ ತಾಣ hಣಣಠಿ://ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಜಾಲತಾಣದಲ್ಲಿರುವ ಸುತ್ತೋಲೆಯಲ್ಲಿನ ಮಾಹಿತಿ ಅಥವಾ ಶಿರಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 


Share: