ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಷ್ಟ್ರೀಯ ಸುದ್ದಿ / ಬಂಟ್ವಾಳ: ಬಡ್ಡಕಟ್ಟೆ ನಿತ್ಯಾನಂದ ಭಜನಾ ಮಂದಿರದಲ್ಲಿ ಪ್ರತಿಷ್ಠಾ ಮಹೋತ್ಸವ

ಬಂಟ್ವಾಳ: ಬಡ್ಡಕಟ್ಟೆ ನಿತ್ಯಾನಂದ ಭಜನಾ ಮಂದಿರದಲ್ಲಿ ಪ್ರತಿಷ್ಠಾ ಮಹೋತ್ಸವ

Mon, 04 Jan 2010 15:36:00  Office Staff   S.O. News Service
ಬಂಟ್ವಾಳ, ಜನವರಿ 4: ತಾಲೂಕಿನ ಪ್ರಸಿದ್ಧ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಭಜನಾ ಮಂದಿರದಲ್ಲಿ ಜ.೬ರಂದು ದೇವರ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ.
 
ಅಂದು ಬೆಳಿಗ್ಗೆ 8 ಗಂಟೆಗೆ ಶ್ರೀ ನಿತ್ಯಾನಂದ ಮತ್ತು ಶ್ರೀ ಗೋವಿಂದ ಸಾಮೀಜಿಯವರ ಪಂಚಲೋಹದ ವಿಗ್ರಹಕ್ಕೆ ಸ್ವತಃ ಸೀಯಾಳ ಅಭಿಷೇಕ ಮಾಡಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಲದ ಅಡಳಿತ ಮಂಡಳಿ ಅಧ್ಯಕ್ಷ ಬಿ.ಮಂಜುನಾಥ ಸಪಲ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
ಇದೇ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಬೆಳಗಾವಿ ಬೇವಿನಕೊಪ್ಪ ಆನಂದಾಶ್ರಮದ ವಿಜಯಾನಂದ ಸ್ವಾಮೀಜಿ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಉಪ್ಪಳ ಯೋಗಾನಂದ ಸರಸ್ವತಿ ಸ್ವಾಮೀಜಿ ಮತ್ತಿತರು ಆಶೀರ್ವಚನ ನೀಡಲಿರುವರು.

ಸಾರ್ವಜನಿಕ ಅನ್ನಸಂತರ್ಪಣೆ, ಭಕ್ತಿಗಾನ ಸುಧಾ, ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಇವರ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Share: