ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಉಪನ್ಯಾಸಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಕಾರವಾರ: ಉಪನ್ಯಾಸಕರ ಹುದ್ದೆಗಾಗಿ ಅರ್ಜಿ ಆಹ್ವಾನ

Wed, 10 Jan 2024 20:23:48  Office Staff   S O News

ಕಾರವಾರ: ದಾಂಡೇಲಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವಿವಿಧ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಉಪನ್ಯಾಸಕರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು , ಬಿಇ ಇನ್ ಮೆಕ್ಯಾನಿಕಲ್ / ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಎಲೆಕ್ಟ್ರಿಕಲ್ಸ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ / ಕಂಪ್ಯೂಟರ್  ಸೈನ್ಸ್ ಇಂಜಿನಿಯರಿಂಗ್, ಎಂಟೆಕ್ ಇನ್ ಮೆಕ್ಯಾನಿಕಲ್ /ಟೂಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ನಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂ.ಎಸ್.ಸಿ ಗಣಿತ ಹಾಗೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ನಮೂನೆ ಹಾಗೂ ಇತರೆ ವಿವರಗಳನ್ನು ಜಿಟಿಟಿಸಿ ಜಾಲತಾಣ : https://gttc.karnataka.gov.in ದಲ್ಲಿ ಪ್ರಕಟಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 16 ರ ಸಂಜೆ 5 ಗಂಟೆಯೊಳಗೆ ಸಂಬಂದಿಸಿದ  ದಾಖಲೆಗಳೊಂದಿಗೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಜಾಜಿನಗರ ಕೈಗಾರಿಕಾ ವಸಾಹತು, ಬೆಂಗಳೂರು ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂ : 080-23507448 ಇ-ಮೇಲ್ : gttcadmn2019@gmail.com ಗೆ ಸಂಪರ್ಕಿಸಿ ಪಡೆಯಬಹುದು ಎಂದು ದಾಂಡೇಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


Share: