ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ : ೬೩,೯೦೧ ಹಿಂದುಳಿದ ಬಡ ಜನರಿಗೆ ಸಾಲ ಸೌಲಭ್ಯ

ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ : ೬೩,೯೦೧ ಹಿಂದುಳಿದ ಬಡ ಜನರಿಗೆ ಸಾಲ ಸೌಲಭ್ಯ

Mon, 03 May 2010 16:17:00  Office Staff   S.O. News Service

ಬೆಂಗಳೂರು:ದಿವಂಗತ  ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ  ಅಶೋಕ ಕಾಟ್ವೆ ಅವರು ಏಪ್ರಿಲ್ ೩೦ ರಂದು ನಿಗಮದ ಒಂದು ವರ್ಷದ ಸಾಧನೆಯ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ಹಿಂದುಳಿದ ವರ್ಗಗಳ ವಿವಿಧ ಸಮಾಜದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಆ-ವರ್ಗಗಳಿಗೆ ನಿಗಮದಿಂದ ಅನುಕೂಲ ಕಲ್ಪಿಸುವ ಉದ್ದೇಶದಿಂದ “ಸಾಂಪ್ರದಾಯಿಕ ವೃತ್ತಿ ಕುಲಕಸಬುದಾರರಿಗೆ ವಿಶೇಷ ಯೋಜನೆ” ಯನ್ನು ಜಾರಿಗೆ ತರಲಾಗಿದೆ.

ಸಾರಾಯಿ ನಿಷೇಧದಿಂದ ಉದ್ಯೋಗ ವಂಚಿತರಾದ “ಮೂರ್ತೆದಾರರಿಗೆ ವಿಶೇಷ ಯೋಜನೆ” ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

೨೦೦೯-೧೦ ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ೬೩,೯೦೦ ಜನರಿಗೆ ೮೮.೯೨ ಕೋಟಿ ರೂಪಾಯಿ ಸಾಲ ಸೌಲಭ್ಯವನ್ನು ನಿಗಮದ ವತಿಯಿಂದ ನೀಡಲಾಗಿದೆ ಎಂದು ಅಶೋಕ್ ಕಾಟ್ವೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗಮದ ಆಡಳಿತವನ್ನು ಶಿಸ್ತುಬದ್ಧಗೊಳಿಸಲು ಸಕಾಲಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೂ ನಿರಂತರ ಪರಿಶೀಲನಾ.ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ.  ಇದರಿಂದಾಗಿ ನಿಗಮಕ್ಕೆ   “ ರಾಷ್ಟ್ರೀಯ ಮಟ್ಟದಲ್ಲಿ ‘ಉತ್ತಮ ಕಾರ್ಯಕ್ಷಮತಾ ಪ್ರಶಸ್ತಿ’  ಹಾಗೂ ಕರ್ನಾಟಕ ರಾಜ್ಯದ ಸಾರ್ವಜನಿಕ ಉದ್ದಿಮೆಗಳಿಗೆ ‘ಸನ್ಮಾನ್ಯ ಮುಖ್ಯಮಂತ್ರಿಗಳ ವಾರ್ಷಿಕ ರತ್ನ ಪ್ರಶಸ್ತಿ’ ಯು ಲಭಿಸಿದೆ.

ರಾಜ್ಯದ ೩೦ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜಿಲ್ಲೆಗಳಲ್ಲಿ ವಿವಿಧ ಸಮಾಜದ ಮುಖಂಡರ ಸಭೆ ಏರ್ಪಡಿಸಿ ಅವರ ಕುಂದು ಕೊರತೆಗಳನ್ನು ಆಲಿಸಲಾಗಿದೆ.  ಸರ್ಕಾರದಿಂದ ಲಭ್ಯವಾಗುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಗಿದೆ.  ಹಿಂದುಳಿದ ವರ್ಗಗಳಿಗೆ ವಿವಿಧ ಯೋಜನೆಗಳಡಿ ನೀಡಲಾದ ಸೌಲಭ್ಯಗಳ ಬಗ್ಗೆ ಪರಿಶೀಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ ಶೆಟ್ಟರ್ ಹಾಗೂ ಸಮಾಜ ಕಲ್ಯಾಣ ಸಚಿವ ಡಿ. ಸುಧಾಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Share: