ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ನ. 29 ರಂದು ಅಲ್ಪಸಂಖ್ಯಾತ ಸಮುದಾಯದವರ ಕುಂದು ಕೊರತೆ ಸಭೆ

ಕಾರವಾರ: ನ. 29 ರಂದು ಅಲ್ಪಸಂಖ್ಯಾತ ಸಮುದಾಯದವರ ಕುಂದು ಕೊರತೆ ಸಭೆ

Sat, 25 Nov 2023 21:30:29  Office Staff   S O news

ಕಾರವಾರ:  ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಸಲ್ಮಾ ಫಿರ್ದೋಸ್ ರವರು ಉತ್ತರಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು, ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದವರಿಗೆ ಕುಂದು ಕೊರತೆ ಸಭೆಯನ್ನು ನ 29 ರಂದು ಬೆಳಿಗ್ಗೆ 10 ರಿಂದ 11:45 ಗಂಟೆವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಾರ್ವಜನಿಕರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವುದರ ಮೂಲಕ ಸದುಪಯೋಗವನ್ನು ಪಡೆದುಕೊಳ್ಳುವುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 08382-220336 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ, ತಾಲೂಕಾ ವಿಸ್ತರಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: