ಕಾರವಾರ: ಕರ್ನಾಟಕ ಲೋಕಾಯುಕ್ತ, ಕಾರವಾರ, ಜಿಲ್ಲಾ ಕಚೇರಿಯ ಅಧಿಕಾರಿಗಳು ಭೇಟಿ ಕಾರ್ಯಕ್ರಮವು, ಸೆ.13 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡು ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ಸಭೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಆಯ್ಕೆಯಡಿ ಭರ್ತಿ ಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಮಾಡಿ, ವಿಚಾರಣೆ ಮಾಡುವರು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಮತ್ತು ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರ್ಕಾರಿ ಹಣ ದುರುಪಯೋಗ, ಕರ್ತವ್ಯ ಲೋಪ ಕಳಪೆ ಕಾಮಗಾರಿ ಮಾಡುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ನಮೂನೆ -1 ಮತ್ತು 2 ರಲ್ಲಿ ಭರ್ತಿಮಾಡಿ ನೀಡಬಹುದಾಗಿದೆ ಹಾಗೂ ಸರ್ಕಾರಿ ಅಧಿಕಾರಿ/ನೌಕರರು ಲಂಚಕ್ಕೆ ಬೇಡಿಕೆ, ಭ್ರಷ್ಟಚಾರ ಮತ್ತು ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಗುಪ್ತ ಮಾಹಿತಿಯನ್ನು ನೀಡಬಹುದಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ; 08382-295293/ 220198/ 222250/ 222022/ 229988 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.