ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಹಾಗೂ ಇತರೆ ಸೌಲಭ್ಯಗಳನ್ನು ನೀಡುವಂತೆ ಸೂಚನೆ

ಕಾರವಾರ: ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಹಾಗೂ ಇತರೆ ಸೌಲಭ್ಯಗಳನ್ನು ನೀಡುವಂತೆ ಸೂಚನೆ

Wed, 08 Mar 2023 04:21:27  Office Staff   S O News

ಕಾರವಾರ: ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರುವ ಸ್ಕಾಲರ್ ಶಿಪ್ ಹಾಗೂ ಇತರೆ ಸೌಲಭ್ಯಗಳನ್ನು ಸರಿಯಾದ ಸಮಯದಲ್ಲಿ ನೀಡುವಂತೆ ತಾಲೂಕು ಪಂಚಾಯತ ಆಡಳಿತಾಧಿಕಾರಿ ಸೋಮಶೇಖರ ಮೇಸ್ತಾ ಅವರು ಹಿಂದುಳಿದ ವರ್ಗಗಳ ಅಧಿಕಾರಿಗಳಿಗೆ ಹೇಳಿದರು.

ನಗರದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಆಯೋಜಿಸಿದ ಕೆ.ಡಿ.ಪಿ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಹಾಸ್ಟೆಲನಲ್ಲಿ ಮತ್ತು ಸ್ಕೋಲೆರ್ಷಿಪ್ ನಲ್ಲಿ ಕೊಂದು ಕೊರತೆ ಬಾರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ವಿವಿಧ ಇಲಾಖೆ ಯೋಜನೆಯಲ್ಲಿ ಬರುವ ಪ್ರಗತಿಯಲ್ಲಿರುವ ಕಾಮಗಾರಿ, ಖಾಲಿ ಇರುವ ಹುದ್ದೆಗಳ ಭರ್ತಿ, ಸೌಲಭ್ಯಗಳು, ಸಮಸ್ಯೆಗಳು, ಕಾಯಿಲೆಗಳ ಬಗ್ಗೆ ಹಾಗೂ 2023-24 ಸಾಲಿನ ಅನುದಾನದಲ್ಲಿ ಅಗತ್ಯತೆಗಳ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಆಹಾರ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರಿಗೆ ನ್ಯಾಯಬೆಲೆ ಅಂಗಡಿಯಲ್ಲಿ ಗುಣಮಟ್ಟದ ಅಕ್ಕಿ, ಗೋದಿ ನೀಡುತ್ತಿದ್ದಾರೆ ಎಂಬುದನ್ನು ಪರಿಶೀಲಿಸಲು ಹಾಗೂ ಕೃಷಿ ಇಲಾಖೆಯವರಿಗೆ ತಾಲೂಕಿನಲ್ಲಿ ಶೇಂಗಾ ಬೆಳೆಯನ್ನು ಬೆಳೆಯಲು ರೈತರಿಗೆ ಸಿಗುವ ಸೌಲಭ್ಯಗಳನ್ನು ಕಲ್ಪಿಸಿ ಹೆಚ್ಚಿನ ಮಟ್ಟದಲ್ಲಿ ಬೆಳೆಯಲು ಪ್ರತ್ಸಾಹ ನೀಡಿ ಎಂದು ಹೇಳಿದರು.

ಬಳಿಕ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ ಸ್ಕೋಲೆರ್ಷಿಪ್ ನೀಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಪೋಸ್ಟ್ ಮೆಟ್ರಿಕ್ 2288 ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಅರ್ಜಿ ಸಲ್ಲಿಸಿದ್ದಾರೆ ಈಗಾಗಲೇ ಅನುದಾನ ಬಿಡುಗಡೆ ಆಗಿದೆ ಫ್ರೀ ಮೆಟ್ರಿಕ್ ವಿದ್ಯಾರ್ಥಿಗಳು 6559 ಅರ್ಜಿಯನ್ನು ಸಲ್ಲಿಸಿದ್ದು ಈಗಾಗಲೇ 6520 ವಿದ್ಯರ್ಥಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು ಉಳಿದ 73 ವಿದ್ಯಾರ್ಥಿಗಳ ಅರ್ಜಿ ಪ್ರಕ್ರಿಯೆ ಪ್ರಗತಿಯಲ್ಲಿ ಇವೆ. ಪ್ರತಿ ಹಾಸ್ಟೆಲ್ ನಲ್ಲಿ 3 ಶಿಕ್ಷಕರಂತೆ ತಾಲೂಕಿನ 8 ಹಾಸ್ಟೆಲ್ಗಳಿಗೆ ಶಿಕ್ಷಕರರನ್ನು ನೇಮಿಸಲಾಗಿದ್ದು ಈಗಾಗಲೇ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಬಳಿಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋನು ಐಗಳ್ ಮಾತನಾಡಿದ ಅವರು ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ 3 ಮತ್ತು ಸಹಾಯಕ ಸಿಬ್ಬಂದಿ ಹುದ್ದೆಗಳು 11 ಅಪ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಹಣಕೋನ ಡಿಜಿಟಲ್ ಗ್ರಂಥಾಲಯಕ್ಕೆ ಗಣಕಯಂತ್ರವನ್ನು ಹಾಗೂ 2022-23ನೇ ಸಾಲಿನ ತಾಲೂಕು ಪಂಚಾಯತ ಆನಿರ್ಬಂದಿತ ಅನುದಾನದ ಅಡಿಯಲ್ಲಿ ಕಾದ್ರಾ ಗ್ರಾಮಪಂಚಾಯಿತಿ ಅಧಿಕಾರಿಗಳಿಗೆ ಮರ ಕಟ್ಟು ಮಾಡುವ ಯಂತ್ರವನ್ನು ವಿತರಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಬಾಲಪ್ಪನವರ ಆನಂದಕುಮಾರ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Share: