ಕಾರವಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ "ಜ್ಞಾನ ದರ್ಶನ" ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 50ಕ್ಕೂ ಹೆಚ್ಚು ಆಯ್ದ ಶಾಲಾ ಮಕ್ಕಳು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಛೇರಿಗೆ ಭೇಟಿ ನೀಡಿದರು.
ಜಿಲ್ಲಾ ಪೊಲೀಸ್ ಕಛೇರಿಯ ವಿವಿಧ ಘಟಕಗಳ ಮಾಹಿತಿ ಹಾಗೂ ಅವುಗಳ ಕಾರ್ಯವ್ಯಾಪ್ತಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಮಕ್ಕಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಸುಮನ್ ಫೆನ್ನೆಕರ್ ಸಂವಾದವನ್ನು ನಡೆಸಿದರು.