ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ ಡಿಸಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ.

ಕಾರವಾರ ಡಿಸಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ.

Wed, 29 Jun 2022 03:55:37  Office Staff   SO News

ಕಾರವಾರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರತೀಯ ಕಿಸಾನ್  ಸಂಘದ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು.  

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು,  ಜಿಲ್ಲೆಯ ಕೃಷಿ, ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗುವ ಹಾನಿಗೆ ವೈಜ್ಞಾನಿಕ ಪರಿಹಾರ ನೀಡಬೇಕು.  ಜಿಲ್ಲೆಯ ಯಾವುದೇ ಪ್ರದೇಶಗಳನ್ನು  ಅಭಯಾರಣ್ಯಕ್ಕೆ ಸೇರಿಸಬಾರದು ಎಂದು ಒತ್ತಾಯಿಸಿದರು.

ಈ ಸಂಬಂಧ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರ ಮೂಲಕ ಸರ್ಕಾರಕ್ಕೆ ಮನವಿ ನೀಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ರೈತ ಮುಖಂಡರು ಹಾಜರಿದ್ದರು.


Share: