ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರದಲ್ಲಿ ಗೋಲ್ 2.0 ಡಿಜಿಟಲ್ ತಂತ್ರಾಂಶ ಕಾರ್ಯಕ್ರಮ

ಕಾರವಾರದಲ್ಲಿ ಗೋಲ್ 2.0 ಡಿಜಿಟಲ್ ತಂತ್ರಾಂಶ ಕಾರ್ಯಕ್ರಮ

Tue, 27 Sep 2022 02:08:29  Office Staff   S O News

ಕಾರವಾರ: ಗೋಲ್ 2.0 ಎಂಬ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ಡಿಜಿಟಲ್ ತಂತ್ರಾಂಶಗಳನ್ನು ಬಳಸಿಕೊಂಡು ಅವಕಾಶಗಳನ್ನು ತೆರೆಯುವ ಮೂಲಕ ಬುಡಕಟ್ಟು ಯುವಕ, ಯುವತಿ ಹಾಗೂ ಮಹಿಳೆಯರನ್ನು ಡಿಜಿಟಲ್ ಆಗಿ ಸಕ್ರೀಯಗೊಳಿಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ಪರಿಶಿಷ್ಟ ಪಂಗಡದ ಯುವಕ, ಯುವತಿಯರು ಹಾಗೂ ಮಹಿಳೆಯರು https://goal.tribal.gov.in  ಪೋರ್ಟ್‍ಲ್‍ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. 

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08382-226575 ಗೆ ಅಥವಾ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉತ್ತರ ಕನ್ನಡ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಅಜ್ಜಪ್ಪ ಸೊಗಲದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: