ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರದಲ್ಲಿ ಪೊಲೀಸ್ ಕಲ್ಯಾಣ ಮಂಟಪ ಉದ್ಘಾಟನೆ

ಕಾರವಾರದಲ್ಲಿ ಪೊಲೀಸ್ ಕಲ್ಯಾಣ ಮಂಟಪ ಉದ್ಘಾಟನೆ

Thu, 28 Apr 2022 03:37:36  Office Staff   SO News

ಕಾರವಾರ :  ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಾಜುಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ಕಲ್ಯಾಣ ಮಂಟಪದ  ಉದ್ಘಾಟನೆ ಮಾಡಲಾಯಿತು.

 ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ  ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ ಪಿ ಹಾಗೂ ವಿಶೇಷ ಆಹ್ವಾನಿತರಾಗಿ  ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಪ್ರಿಯಾಂಗಾ ಎಂ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತಕುಮಾರ್ ಕೆ ಸಿ   ಆಗಮಿಸಿದ್ದರು. 

ಸಮಾರಂಭದಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀಮತಿ ಸುಮನ್ ಡಿ ಪೆನ್ನೇಕರ್ ,  ಪ್ರಾಸ್ತಾವಿಕ ವಾಗಿ ಮಾತನಾಡಿ, ಪೊಲೀಸ್ ಕಲ್ಯಾಣ ಮಂಟಪವನ್ನು  ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಪೊಲೀಸ್ ಕಲ್ಯಾಣ ಮಂಟಪವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

  ಜಿಲ್ಲಾಧಿಕಾರಿ ಮುಲೈ ಮುಹಿಲನ್  ಮಾತನಾಡಿ,  ಪೊಲೀಸ್ ಸಿಬ್ಬಂದಿಗಳಿಗೆ ಇತ್ತೀಚಿನ ದಿನಗಳಲ್ಲಿ ಸರ್ಕಾರವು ಪೊಲೀಸರಿಗೆ ಒಳ್ಳೆಯ ಸುಸಜ್ಜಿತ ವಸತಿಗೃಹ ಹಾಗೂ ಕಲ್ಯಾಣ ಮಂಟಪ ನಿರ್ಮಿಸುತ್ತಿದ್ದು ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.

 ಕಾರ್ಯಕ್ರಮದಲ್ಲಿ  ಡಿವೈಎಸ್ಪಿ ವಾಲೆಂಟೈನ್ ಡಿಸೋಜ ಸ್ವಾಗತಿಸಿದರು.  ಹೆಚ್ಚುವರಿ ಪೊಲೀಸ್ ಅಧಿಕ್ಷಕರಾ ಬದರಿನಾಥ್  ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಕುಟುಂಬ  ವರ್ಗದವರು ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ  ಲಿಪಿಕ ಸಿಬ್ಬಂದಿಗಳು ಪಾಲ್ಗೊಂಡಿದ್ದರು.


Share: