ಕಾರವಾರ : ಮೀನುಗಾರಿಕೆ ಮತ್ತು ಮೀನುಗಾರಿಕೆ ಮಾರುಕಟ್ಟೆಯನ್ನು ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರುಪಾಲಾ ಹೇಳಿದರು
ನಗರದ ಜಿಲ್ಲಾ ರಂಗಮಂದಿರದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ, ಸಾಗರ ಪರಿಕ್ರಮ 2023 ಹಂತ IV ಕಾರ್ಯಕ್ರಮದಲ್ಲಿ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವುದೇ ಕೇಂದ್ರ ಸರ್ಕಾರದ ಮುಖ್ಯ ಧ್ಯೇಯವಾಗಿದೆ ಇದಕ್ಕಾಗಿಯೇ ಸರ್ಕಾರವು ನೀಲಿ ಕ್ರಾಂತಿಯನ್ನು ಜಾರಿಗೊಳಿಸಿ 6 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದೆ ಎಂದರು.
ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಯೇ ಪ್ರಧಾನ ಮಂತ್ರಿಗಳು ಇಂದು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಜಾರಿಗೊಳಿಸಿದೆ. ಹಾಗೆಯೇ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಕೂಡ ಜಾರಿಗೊಳಿಸಿದ್ದಾರೆ ಮೊದಲು ಈ ಯೋಜನೆಯು ಸೌಲಭ್ಯವನ್ನು ಕೇವಲ ಕ್ರಷಿಕರಿಗೆ ಮಾತ್ರ ವಿತರಿಸಲಾಗುತ್ತಿತ್ತು ಇಂದು ಮೀನುಗಾರಿಕೆಗೂ ವಿಸ್ತರಿಸಿ ಮೀನುಗಾರಿಕೆಯನ್ನು ಅಭಿವೃದ್ಧಿಪತತ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾರೆ ಒಂದು ಯೋಜನೆಯ ಮುಖಾಂತರ ಮೀನುಗಾರರು ಒಂದು ಲಕ್ಷ ದಿಂದ 1.5 ಲಕ್ಷದವರೆಗೆ ಯಾವುದೇ ಭದ್ರತೆ ಇಲ್ಲದೆ ಬ್ಯಾಂಕುಗಳಿಂದ ಸಾಲವನ್ನು ಪಡೆಯಬಹುದಾಗಿದೆ ಎಂದರು.
ಅದರಲ್ಲೂ ವಿಶೇಷವಾಗಿ ಕರ್ನಾಟಕವು ಮೀನುಗಾರಿಕೆಗೆ ತನಗೆ ಆದ ಕೊಡುಗೆಯನ್ನು ನೀಡಿದೆ ಅಲ್ಲದೆ ಕರ್ನಾಟಕವು ಪ್ರಾಚೀನ ಕಾಲದ ಇತಿಹಾಸ, ಆಧುನಿಕ ಕಾಲದ ಇತಿಹಾಸ, ವಿಜ್ಞಾನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಸಂಪನ್ಮೂಲಗಳಿಗೆ ಹೆಸರಾಗಿದೆ ಎಂದರು.
ಬಳಿಕ ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಮುರುಗನ್ ಮಾತನಾಡಿ, ಸಾಗರ ಪರಿಕ್ರಮ ಕಾರ್ಯಕ್ರಮವು ಒಂದು ಸಾಧರಣ ಕಾರ್ಯಕ್ರಮವವಲ್ಲ ಕೇಂದ್ರ ಸಚಿವರು ನೇರವಾಗಿ ಮೀನುಗಾರರನ್ನು ಭೇಟಿ ಮಾಡಿ ಅವರೇ ಸಮಸ್ಯೆಗಳನ್ನು ಆಲಿಸಿ ಅವರಿಗೋಸ್ಕರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮನವರಿಕೆ ಮಾಡಲು ಹಾಕಿಕೊಂಡ ಕಾರ್ಯಕ್ರಮವಾಗಿದೆ ಎಂದರು.
ಮೀನುಗಾರರ ಅಭಿವೃದ್ಧಿಗಾಗಿ ಕೇಂದ್ರ ಸರಕಾರವು ಮೀನುಗಾರಿಕೆ ಸಚಿವಾಲಯವನ್ನು ಪ್ರಾರಂಭಿಸಿದೆ 2015ರ ಮೊದಲು ಕೇವಲ ಮೂರು ಸಾವಿರ ಕೋಟಿ ಇದ್ದ ಹೂಡಿಕೆಯು ಇಂದು 38,000 ಕೋಟಿ ಹೂಡಿಕೆ ಮಾಡಲಾಗಿದೆ ಎಂದರು. ಇಂತಹ ಯೋಜನೆಗಳ ಮೂಲಕ ಸರ್ಕಾರವು ದೇಶದ ನಾನಾ ಭಾಗಗಳಲ್ಲಿ ಮೀನುಗಾರಿಕೆ ಮಾರುಕಟ್ಟೆ,, ಕೋಲ್ಡ್ ಸ್ಟೋರೇಜ್ ಹಾಗೂ ಬಂದರುಗಳನ್ನು ನಿರ್ಮಾಣ ಮಾಡಲು ಹೊರಟಿದೆ ಎಂದರು.
ಬಳಿಕ ಮೀನುಗಾರಿಕೆ ಸಚಿವ ಅಂಗಾರ್ ಅವರು ಮಾತನಾಡಿ, ಒಳನಾಡು ಮೀನುಗಾರಿಕೆ ಅಂದರೆ ಕೃತಕವಾಗಿ ಮೀನುಗಾರಿಕೆಗೆ ಇಂದು ಹೆಚ್ಚು ಒತ್ತು ನೀಡುವುದು ಅವಶ್ಯಕವಾಗಿದೆ ಕರ್ನಾಟಕಕ್ಕೆ 60 ಕೋಟಿ ಮೀನು ಮರಿ ಅವಶ್ಯಕತೆ ಅದರಲ್ಲಿ 40 ಕೋಟಿ ಮೀನು ಮರಿ ಉತ್ಪಾದಿಸಲಾಗಿದೆ ಉಳಿದ 20 ಕೋಟಿ ಮೀನು ಮರಿ ಬೇಡಿಕೆಯಿದೆ ಎಂದರು. ಬಾಗಲಕೋಟ್ ಜಿಲ್ಲೆಯ ಆಲಮಟ್ಟಿಯಲ್ಲಿ 25 ಹೆಕ್ಟರ್ ಪ್ರದೇಶದಲ್ಲಿ ಮೀನು ಮರಿ ಉತ್ಪಾದನೆಗೆ ಈಗಾಗಲೇ ಅವಕಾಶ ನೀಡಿದ್ದಾರೆ ಮುಂದಿನ ದಿನಗಳಲ್ಲಿ ರಾಜ್ಯದ ನಾನಾ ಕಡೆಗಳಲ್ಲಿ ಮೀನು ಮರಿ ಉತ್ಪಾದನಾ ಕೇಂದ್ರವನ್ನು ಆರಂಭಿಸಲಾಗುವುದು ಆಗ ಕರ್ನಾಟಕವು ಇಡೀ ದೇಶದಲ್ಲಿಯೇ ಮೀನು ಉತ್ಪಾದನೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಆಶಯ ಹೊಂದಿದ್ದೇವೆ ಎಂದರು.
ಬಳಿಕ ಪೋಸ್ಟ್ ಗಾರ್ಡ್ ಅಧಿಕಾರಿ ಮನೋಜ್ ಬಾಡ್ಕರ್ ಮಾತನಾಡಿ, ಪ್ರತಿ ಬಾರಿ ನಾವುಗಳು ಇಲ್ಲಿನ ಮೀನುಗಾರರ ಸಮಸ್ಯೆಗಳನ್ನು ಮಂತ್ರಿಗಳ ಗಮನಕ್ಕೆ ತರುತ್ತಿದ್ದೇವೆ ಹಾಗೆಯೇ ಮೀನುಗಾರಿಕೆಯ ವ್ಯಾಪಾರವನ್ನು ಹೇಗೆ ಹೆಚ್ಚಿಸಿಕೊಳ್ಳಬೇಕು, ಮಾರುಕಟ್ಟೆಯನ್ನು ಹೇಗೆ ಬೆಳೆಸಿಕೊಳ್ಳಬೇಕು ಮೀನುಗಾರರ ಸರ್ವತೋಮುಖ ಅಭಿವೃದ್ಧಿಗೆ ಯಾವೆಲ್ಲ ಮಾರ್ಗಗಳನ್ನು ಅನುಸರಿಸಬೇಕು ಎಂಬುದನ್ನು ಮಂತ್ರಿಗಳ ಗಮನಕ್ಕೆ ತಂದು ಎಲ್ಲಾ ಸಮಸ್ಯೆಗಳ ಪರಿಹಾರಿಸುವುದಕ್ಕೆ ಕ್ರಮ ವಹಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಶಾಸಕಿ ರೂಪಾಲಿ ನಾಯ್ಕ, ಮೀನುಗಾರಿಕೆ ಜಂಟಿ ನಿರ್ದೇಶಕ ಜೆ ಬಾಲನಿಧಿ, ಮೀನುಗಾರಿಕೆ ಮುಖ್ಯ ಕಾರ್ಯದರ್ಶಿ ಜತಿಂದ್ರ ಶೋಯಲ್, ಮೀನುಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ತಾಳೆಕರ, ಉಪ ನಿರ್ದೇಶಕ ಪ್ರತೀಕ್, ನಗರ ಸಭೆ ಅಧ್ಯಕ್ಷ ನಿತೀನ್ ಪಿಕಳೆ, ಜಿಲ್ಲಾ ಮೀನುಗಾರಿಕೆ ಒಕ್ಕೂಟದ ಅಧ್ಯಕ್ಷ ರಾಜು ತಂಡೇಲಿ ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.