ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರ್ಕಳ : ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ.

ಕಾರ್ಕಳ : ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ.

Mon, 17 Jul 2023 04:47:44  Office Staff   SO News

ಕಾರ್ಕಳ: ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು  ತಮ್ಮ ಮನೆಯಲ್ಲಿ   ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಾರ್ಕಳ ನಿವಾಸಿ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಾರ್ಕಳ ನಗರ ಠಾಣೆಯಲ್ಲಿ ಹೆಡ್‌ಕಾನ್ಸಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಜೆಯಲ್ಲಿದ್ದ ಪ್ರಶಾಂತ್ ಕಾರ್ಕಳದ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share: