ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕುಮಟಾ : ಖಾಸಗಿ ಆಸ್ಪತ್ರೆಗಳಲ್ಲಿ ಬಾಣಂತಿ ಸಾವು. ವೈದ್ಯರ ನಿರ್ಲಕ್ಷ್ಯ ಆರೋಪ.

ಕುಮಟಾ : ಖಾಸಗಿ ಆಸ್ಪತ್ರೆಗಳಲ್ಲಿ ಬಾಣಂತಿ ಸಾವು. ವೈದ್ಯರ ನಿರ್ಲಕ್ಷ್ಯ ಆರೋಪ.

Wed, 29 Jun 2022 04:24:09  Office Staff   SO News

ಕುಮಟಾ :  ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. 

 ವೈದ್ಯರ ನಿರ್ಲಕ್ಷದಿಂದಲೇ ಮಹಿಳೆ ಸಾವನ್ನಪ್ಪಿದ್ದಾಳೆಂದು ಮೃತಳ ಸಂಬಂಧಿಕರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಜಯಮಾಲ ಲೋಕೇಶ ಮಿರ್ಜಾನಕರ್ (23) ಮೃತ ಬಾಣಂತಿಯಾಗಿದ್ದು, 
ಕಳೆದ ಎರಡು ದಿನಗಳ ಹಿಂದಷ್ಟೆ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಮಗುವಿಗೆವಜನ್ಮ ನೀಡಿದ್ದಳು‌.  ಎದೆನೋವೆಂದು ಹೇಳಿದ್ದರೂ ಕೂಡ ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆಂದು ಸಂಬಂಧಿಕರು ಆರೋಪಿಸಿದ್ದಾರೆ.

ಈ ವೇಳೆ ಪೊಲೀಸರು ಮತ್ತು ವೈದ್ಯರೊಂದಿಗೆ ಮಾತಿನ ಚಕಮಕಿ ನಡೆದಿದೆ. ಪೋಸ್ಟ್ ಮಾರ್ಟ್ಂ ಬಳಿಕ ಸಾವಿಗೆ ನಿಖರ  ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ಸಂಬಂಧಿಕರಿಗೆ ಸಮಧಾನ ಹೇಳಿದ್ದಾರೆ.


Share: