ಕುಮಟಾ : ಬಡವರ, ದಿನ ದಲಿತರ ಹಾಗೂ ಹಿಂದುಳಿದ ವರ್ಗಗಳ ಜನರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಕೆಲಸಮಾಡುವುದು ಅವಶ್ಯಕತೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಶುಕ್ರವಾರ ಕುಮಟಾದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 1935 ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರೆವರಿಸಿ ಮಾತನಾಡಿದ ಅವರು, ಕರ್ನಾಟಕದ 31 ಜಿಲ್ಲಾಗಳಲ್ಲಿ ಇಂದು ಫಲಾನುಭವಿಗಳ ಸಮಾವೇಶ ನಡೆಯುತ್ತಿದ್ದು ರಾಜ್ಯದ ಎಲ್ಲಾ ಸಮಾವೇಶಗಳಿಗಿಂತಲೂ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಫಲಾನುಭವಿಗಳ ಸಮಾವೇಶ ಮಾಡುತ್ತಿದ್ದೇವೆ ಎಂದರು.
ಜಿಲ್ಲೆಯಲ್ಲಿ 20 ಸಾವಿರ ಫಲಾನುಭವಿಗಳಿಗೆ ಇಂದು ವಿವಿಧ ಯೋಜನೆಗಳ ಸೌಲಭ್ಯವನ್ನು ವಿತರಿಸು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಈಗಾಗಲೇ ಜಿಲ್ಲೆಯಲ್ಲಿ 80 ಸಾವಿರ ಕುಟುಂಬಗಳಿಗೆ ಜಲ ಜೀವನ ಮಿಷನ್ ಅಡಿ ಮನೆ ಮನೆಗೆ ಗಂಗೆ ಯೋಜನೆಯ ಮುಲಕ ನೀರಾವರಿ ವ್ಯವಸ್ಥೆಯನ್ನು ಕಳಿಸಿಕೊಡಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ರಾಜ್ಯದ 1 ಲಕ್ಷ 68 ಸಾವಿರ ಫಲನುಭವಿಗಳಿಗೆ 168 ಕೋಟಿ ವೆಚ್ಚದಲ್ಲಿ ಅರ್ಜಿ ಸಲ್ಲಿಸದೆ ಕೇಂದ್ರ ಸರ್ಕಾರದಿಂದ ರೂ. 6000 ಹಾಗೂ ರಾಜ್ಯ ಸರ್ಕಾರದಿಂದ ರೂ 4000 ಗಳನ್ನು ಅವರ ಖಾತೆ ಗೆ ಜಮಾ ಮಾಡಲಾಗಿದೆ ಇದು ವಿನುತನ ಯೋಜನೆಯಾಗಿದೆ ಎಂದರು. ಹಾಗೆಯೇ ಬೆಳಕು ಯೋಜನೆಯಡಿ ಮೂಲಕ 13000 ಕುಟುಂಬಗಳಿಗೆ ವಿದ್ಯತ್ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ರೈತ ನಿಧಿ ಯೋಜನೆಯ ಮೂಲಕ ಎಲ್ಲ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅನುದಾನ ನೀಡಿದ್ದಾರೆ ಇದರಿಂದ ಬಡ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಾಯಕರಿಯಾಗಲಿದೆ ಎಂದರು.
ಜಿಲ್ಲೆಯಲ್ಲಿ 3000 ಸಾವಿರ ಶೌಚಾಲಯಗಳ್ಳನ್ನು ನಿರ್ಮಿಸಲು ಸೌಲಭ್ಯ ಕಲ್ಪಿಸಿದ್ದೇವೆ ಮುಂದಿನ ದಿನಗಳಲ್ಲಿ ಜಿಲ್ಲೆಯು ಬಯಲು ಶೌಚ ಮುಕ್ತ ಜಿಲ್ಲೆಯಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.
ಜಿಲ್ಲೆಯಲ್ಲಿ ಈವರೆಗೆ ಮನೆ ಇಲ್ಲದವರಿಗೆ 2000 ಮನೆಗಳನ್ನು ಮಂಜೂರು ಮಾಡುತ್ತಿದ್ದೇವೆ. ಸಮಾಜದ ಕಟ್ಟೆ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ 28000 ಫಲಾನುಭವಿಗಳಿಗೆ ರೂ. 50 ಸಾವಿರ ಸಬ್ಸಿಡಿಯೊಂದಿಗೆ ದ್ವಿಚಕ್ರ ವಾಹನ ನೀಡುತ್ತಿದ್ದೇವೆ ಇದು ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಕೈಕೊಳ್ಳಲು ಸಹಾಯಕಾರಿಯಾಗಿದೆ ಎಂದರು ಹಾಗೆಯೇ ಮಹಿಳೆಯರಿಗೆ ಹೋಲಿಗೆ ಯಂತ್ರ ಪೂರೈಸುತ್ತಿದ್ದೇವೆ, ರಾಜ್ಯದ ವಿವಿಧ ಸಮುದಾಯಗಳಿಗೆ ಮಿಸಲಾತಿ ಹೆಚ್ಚಿಸಲಾಗಿದೆ. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ 23000 ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯತ್ ನೀಡಲಾಗಿದೆ ಎಂದರು ಹೀಗೆ ಸಾಕಷ್ಟು ಯೋಜನೆಯ ಮೂಲಕ ಬಡ, ದಿನ ದಲಿತರ ಏಳಿಗೆಗಾಗಿ ಸರಕಾರ ಕೆಲಸ ಮಾಡುತ್ತಿದೆ ಎಂದರು.
ಬಳಿಕ ಇಂಧನ ಸಚಿವ ಸುನಿಲ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಇಂದು ಸಾವಿರಾರು ಫಲಾನುಭವಿಗಳಿಗೆ ನೀಡುವ ಸಲುವಾಗಿ ಎಲ್ಲರನ್ನು ಒಂದು ಕಡೆ ಸೇರಿಸಿದದ್ದೇವೆ ಎಂದರು.
ಸರ್ಕಾರದಿಂದ ಜಾರಿಯಾದ ಯೋಜನೆಗಳಲ್ಲಿ ಪ್ರತಿಷತ್ 80 ರಷ್ಟು ಯೋಜನೆಗಳನ್ನು ಈಗಾಗಲೇ ಜನರಿಗೆ ತಲುಪಿಸಿದ್ದೇವೆ ಎಂದರು. ಸರ್ಕಾರವು ಮಹಿಳೆಯರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದೆ ಅದರಲ್ಲಿ ಮಡಿಲು ಯೋಜನೆ , ಸಂದ್ಯಾ ಸುರಕ್ಷಾ ಯೋಜನೆ,ಉಜ್ವಲ ಯೋಜನೆ, ಹೆಣ್ಣು ಮಕ್ಕಳಿಗೆ ಸೈಕಲ್ ವಿತರಣೆ ಮುಂತಾದ ಯೋಜನೆಗಳ ಮೂಲಕ ಅವರು ಬೆಳವಣಿಗೆಗೆ ಶ್ರಮಿಸುತ್ತಿದೆ ಎಂದರು. ಸರ್ಕಾರ ಮಾಡಿರು ಕೆಲಸವನ್ನು ಜನರಿಗೆ ತೋರಿಸಲು ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ ಎಂದರು.
ಬಳಿಕ ವಿಧಾನ ಸಬಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ದೇಶಕ್ಕೆ ಸ್ವತಂತ್ರ ಬಂದಾಗ ಆಹಾರಕ್ಕಾಗಿ ಪರದಾಡುತ್ತಿದ್ದೆವು ಇಂದು ನಾವು ಸ್ವವಿಲಂಬನೆಯಾಗಿದ್ದೇವೆ ಈ ಸಂದರ್ಭದಲ್ಲಿ ರೈತರನ್ನು ಸ್ಮರಿಸುವುದು ಅವಶ್ಯಕತೆ ಇದೆ ಎಂದರು. ಹಾಗೆಯೇ ದೇಶದಲ್ಲಿ ಅರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿದ್ದೇವೆ ಜೊತೆಗೆ ಸೈನಿಕ್ ಕ್ಷೇತ್ರದಲ್ಲೂ ಸಾಕಷ್ಟು ಬದಲಾವಣೆ ತಂದಿದ್ದೇವೆ ಹೀಗಾಗಿ ಇಂದು ದೇಶದ ಸೇನಾ ಬಲವು ಸಾಕಷ್ಟು ಶಸಕ್ತವಾಗಿದೆ ಎಂದರು. ಜೊತೆ ಜೊತೆಗೆ ಶಿಕ್ಷಣ, ಕೈಗಾರಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವುದರ ಮೂಲಕ ಅಭಿವೃದ್ಧಿ ಪಥದತ್ತ ದೇಶ ಸಾಗುತ್ತಿದೆ ಎಂದರು ಇಂದು ಭಾರತ ಬಲಿಷ್ಠ ರಾಷ್ಟ್ರವಾಗಿ ಎದ್ದು ನಿಂತಿದೆ ಇದಕ್ಕೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳೇ ಮೂಲವಾಗಿದೆ ಎಂದರು.
ಇದೆ ಸಂದರ್ಭದಲ್ಲಿ ವಿವಿಧ ಇಲಾಖೆಯಿಂದ ವಿವಿಧ ಫಲಾನುಭವಿಗಳೆಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಸಕಿ ರೂಪಾಲಿ ನಾಯ್ಕ, ಭಟ್ಕಳ್ ಶಾಸಕ ಸುನಿಲ್ ನಾಯ್ಕ, , ಕುಮಟಾ ಶಾಸಕ ದಿನಕರ ಶೆಟ್ಟಿ, , ವಿಧಾನ ಪರಿಷತ್ ಸದಸ್ಯ ಶಾಂತಾರಮ ಸಿದ್ದಿ, , ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಈಶ್ವರ್ ಕಾಂದೂ, ಕುಮಟಾ ಉಪ ವಿಭಾಗಧಿಕಾರಿ ರಾಘವೇಂದ್ರ ಜಗಲಾಸರ್,ಅಧ್ಯಕ್ಷರು ಪುರಸಬೆ ಕುಮಟಾ ಅನುರಾಧ ಬಾಳೆರಿ, ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.