ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಷ್ಟ್ರೀಯ ಸುದ್ದಿ / ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳ ಅಮಾನತು

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳ ಅಮಾನತು

Fri, 16 Oct 2009 07:15:00  Office Staff   S.O. News Service
ಮಂಗಳೂರು, ಅ.15: ಕಾಮಗಾರಿಯ ಹಣ ಮಂಜೂರು ಮಾಡಲು ಗುತ್ತಿಗೆದಾರರಿಂದ ಲಂಚ ಕೇಳಿದ ಆರೋಪಿಗಳಾದ ಮೂವರು ಎಂಜಿನಿಯರ್‌ಗಳನ್ನು ಅಮಾನತು ಗೊಳಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಮಂಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೇಶ್ ಕುಮಾರ್, ಸಹಾಯಕ ಎಂಜಿನಿಯರ್ ಸಂತೋಷ್ ಕುಮಾರ್, ಕಾರ್ಯನಿರ್ವಾಹಕ ಎಂಜಿನಿಯರ್ ನರಸಿಂಹರಾಜು ಎಂಬವರು ಅಮಾನತುಗೊಂಡವರು. ಈ ಮೂವರು ಎಂಜಿನಿಯರ್‌ಗಳು ಗುತ್ತಿಗೆದಾರರಿಂದ ಕೋಟ್ಯಾಂತರ ರೂ. ಲಂಚ ಕೇಳಿದ್ದರು ಎಂದು ಆರೋಪಿಸಲಾಗಿದೆ.

ಕೆಲವು ದಿನಗಳ ಹಿಂದೆ ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಮೂವರು ಎಂಜಿನಿಯರ್‌ಗಳು ಸಿಕ್ಕಿಬಿದ್ದಿದ್ದರು. 

ಮಂಗಳೂರು ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಆರೋಪಿಗಳು ಹೈಕೋರ್ಟ್ ಮೆಟ್ಟಲೇರಿ ಜಾಮೀನು ಪಡೆದಿದ್ದರು. ಇದೀಗ ಸರಕಾರ ಆರೋಪಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

Share: