ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಷ್ಟ್ರೀಯ ಸುದ್ದಿ / ಸರ್ಕಾರಿ ಕೈಗಾರಿಕಾ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸರ್ಕಾರಿ ಕೈಗಾರಿಕಾ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Fri, 30 Apr 2010 13:59:00  Office Staff   S.O. News Service

ಬೆಂಗಳೂರು, ಏಪ್ರಿಲ್ ೩೦ : (ಕರ್ನಾಟಕ ವಾರ್ತೆ) -   ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ ೨೦೧೦ ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. 

ನಿಗದಿತ ಶುಲ್ಕವನ್ನು ಪಾವತಿಮಾಡಿ, ಪ್ರವೇಶ ಅರ್ಜಿಗಳನ್ನು ಸಂಬಂಧಪಟ್ಟ ಆಯಾ ಜಿಲ್ಲೆಗಳಲ್ಲಿರುವ ಎಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಂದ ಮೇ ೨೦ ರಿಂದ ಪಡೆಯಬಹುದಾಗಿದೆ.  ಹೆಚ್ಚಿನ ವಿವರಗಳನ್ನು ಸಂಬಂಧಪಟ್ಟ ಜಿಲ್ಲೆ ನೋಡಲ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಿಂದ ಪಡೆಯಬಹುದಾಗಿದೆ.

ಭರ್ತಿಮಾಡಿದ ಅರ್ಜಿಗಳನ್ನು ಅರ್ಜಿ ಪಡೆದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಸಲ್ಲಿಸಲು ಜೂನ್ ೧೯ ಆಗಿರುತ್ತದೆ.  

ಪ್ರವೇಶಕ್ಕೆ ಸಂಬಂಧಿಸಿದ ವೃತ್ತಿ/ಘಟಕಗಳ ವಿವರಗಳು ಹಾಗೂ ಇನ್ನಿತರ ಎಲ್ಲಾ ಮಹಿತಿಗಳನ್ನು ಆಯಾ ಜಿಲ್ಲೆಯ ಸಂಬಂಧಪಟ್ಟ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಚಾರ್ಯರುಗಳಿಂದ ಪಡೆಯಬಹುದಾಗಿದೆ.

ಮೆರಿಟ್ ಕಮ್ ರಿಸರ್ವೇಷನ್ ಆಧಾರದ ಮೇಲೆ ಸರ್ಕಾರಿ  ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು  ಜಿಲ್ಲೆಯ ನೋಡಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ನಡೆಸಲಾಗುವುದು.  ಪ್ರತಿಯೊಂದು ವೃತ್ತಿಯಲ್ಲಿ ನಿಗದಿತ ಸ್ಥಾನಗಳಿಗಿಂತ ಹೆಚ್ಚುವರಿಯಾಗಿ ಪ್ರವೇಶ ನೀಡುವಂತಿಲ್ಲ ಎಂದು ಉದ್ಯೋಗ ಮತ್ತು ತರಬೇತಿ ಇಲಾಖಾ ಪ್ರಕಟಣೆ ತಿಳಿಸಿದೆ.


Share: