ಹೊನ್ನಾವರ : ರೈಲ್ವೇ ನಿಲ್ದಾಣದ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನ ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ.
ಹೊನ್ನಾವರದ ಕರ್ಕಿ ರೈಲ್ವೇ ನಿಲ್ದಾಣದ ಸಮೀಪ ಪೊಲೀಸರು ದಾಳಿ ನಡೆಸಿದ್ದಾರೆ. ಹೊನ್ನಾವರದ ನಾಗರಾಜ ಆಚಾರ್ಯ, ಕಾಸಕೋಡದ ಸಮೀರ್ ಶೇಖ್ ಬಂಧಿತರಾಗಿದ್ದಾರೆ. ಬಂಧಿತರಿಂದ 15 ಸಾವಿರ ಮೌಲ್ಯದ 530 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇಬ್ಬರು ರೈಲ್ವೇ ನಿಲ್ದಾಣದ ಬಳಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.