ಕೊಡಗು : ಜಿಲ್ಲಾ ಪೊಲೀಸ್ ವತಿಯಿಂದ ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರ ಸಭಾಂಗಣದಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಅಭಿಯಾನ ಮತ್ತು ನಾಗರಿಕ ಬಂದೂಕು ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾ. ಎಂ. ಎ ಅಯ್ಯಪ್ಪ ಕಾರ್ಯಕ್ರಮ ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ಹಾಗು ಕಾಲೇಜು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ ಕುರಿತು ತಿಳಿಸಿದರು.
ವಿರಾಜಪೇಟೆ ಉಪವಿಭಾಗ ಡಿವೈಎಸ್‌ಪಿ ನಿರಂಜನ್ ರಾಜೇ ಅರಸ್ ರವರು ರಸ್ತೆ ಸಂಚಾರ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಪಾಲನೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗೋಣಿಕೊಪ್ಪ ವ್ಯಾಪ್ತಿಯ ನಾಗರಿಕರಿಗಾಗಿ ಆಯೋಜಸಿರುವ ಒಂದು ವಾರದ ನಾಗರಿಕ ಬಂದೂಕು ತರಬೇತಿಗೆ ಸಹಾ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು, ವಿವಿಧ ವಾಹನ ಸಂಘ ಸಂಸ್ಥೆಗಳ ಸದಸ್ಯರು, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಸಿ.ಪಿ.ಐ ಗೋವಿಂದರಾಜು ರವರು ಸ್ವಾಗತಿಸಿದ್ದು, ಡಿಎಆರ್ ಪೊಲೀಸ್ ನಿರೀಕ್ಷಕ ಚನ್ನಾನಾಯಕ ವಂದಿಸಿದರು. ಗೋಣಿಕೊಪ್ಪ ಠಾಣೆಯ ಪೂವಣ್ಣ ರವರು ಕಾರ್ಯಕ್ರಮ ನಿರೂಪಿಸಿದರು.