ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಗ್ಯಾಸ್ ಟ್ಯಾಂಕರ್ ಸೋರಿಕೆ ಸಾಧ್ಯತೆ :ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ

ಗ್ಯಾಸ್ ಟ್ಯಾಂಕರ್ ಸೋರಿಕೆ ಸಾಧ್ಯತೆ :ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ

Wed, 17 Jul 2024 00:08:59  Office Staff   SOnews

 

ಕಾರವಾರ : ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಮಳೆಯಿಂದ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾಮ ಪಂಚಾಯತ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು ಗ್ಯಾಸ್ ಟ್ಯಾಂಕರ್ ಸೋರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ  ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ಸದರಿ ಭೂ ಕುಸಿತದಲ್ಲಿ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಉರುಳಿ ಬಿದ್ದಿದ್ದು, ಸದರಿ ಗ್ಯಾಸ್ ಟ್ಯಾಂಕರ್ಗಳು ಸೋರಿಕೆಯಾಗುವ ಸಾಧ್ಯತೆ ಇರುವುದರಿಂದನದಿ ದಡದಲ್ಲಿರುವ ಮನೆಗಳಲ್ಲಿ ವಾಸವಿರುವ ಸಾರ್ವಜನಿಕರು, ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಅವಶ್ಯಕವಾಗಿದೆ.

ಆದ್ದರಿಂದ ಸಂಬAಧಪಟ್ಟ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಸಂಬA ಪಟ್ಟ ತಾಲ್ಲೂಕಿನ ತಹಶೀಲ್ದಾರರು, ಸಹಾಯಕ ಆಯುಕ್ತರು ಕೂಡಲೇ ಮುನ್ನೆಚರಿಕೆ ಕ್ರಮವಾಗಿ ನದಿ ದಡದಲ್ಲಿರುವ ಎಲ್ಲಾ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಸುರಕ್ಷಿತ ಸ್ಥಳಗಳಾದ ಕಾಳಜಿ ಕೇಂದ್ರದಲ್ಲಿ ಸ್ಥಳಾಂತರಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟಿನ  ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.

ಎಲ್ಲಾ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅದ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ : ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಗುಡ್ಡ, ನದಿ, ಹಳ್ಳ, ಕೆರೆ ಹತ್ತಿರದಲ್ಲಿ ವಾಸಿಸುತ್ತಿರುವ ಕುಟುಂಬಸ್ಥರನ್ನು ಮತ್ತು ಸಾರ್ವಜನಿಕರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಅವಶ್ಯಕತೆ ಇರುವುದರಿಂದ ಜಿಲ್ಲೆಯ ಸಂಬAಧಪಟ್ಟ ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಸಂಬA ಪಟ್ಟ ತಾಲ್ಲೂಕಿನ ತಹಶೀಲ್ದಾರರು, ಸಹಾಯಕ ಆಯುಕ್ತರು ಕೂಡಲೇ ಮುನ್ನೆಚರಿಕೆ ಕ್ರಮವಾಗಿ ಗುಡ್ಡ, ನದಿ, ಹಳ್ಳ, ಕೆರೆ ದಡದಲ್ಲಿರುವ ಎಲ್ಲಾ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.

ಎಲ್ಲಾ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅದ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಲಕ್ಷಿö್ಮÃಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: