ಧಾರವಾಡ : ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಗ್ರಾಮ ಪಂಚಾಯತ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ.
ಮೇ 10 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಮೇ 11 ರಂದು ನಾಮಪತ್ರಗಳ ಪರಿಶೀಲನೆ, ಮೇ 13 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಮೇ 20 ಶುಕ್ರವಾರದಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಸಲಾಗುವುದು. ಮೇ.22 ಭಾನುವಾರದಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.