ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಚಿತ್ರದುರ್ಗದಲ್ಲಿ ಸಂಭವಿಸಿದ ಅಪಘಾತದಲ್ಲಿ ಹೊನ್ನಾವರ ಮೂಲದ ಮೂವರು ಯುವಕರು ಸಾವು.

ಚಿತ್ರದುರ್ಗದಲ್ಲಿ ಸಂಭವಿಸಿದ ಅಪಘಾತದಲ್ಲಿ ಹೊನ್ನಾವರ ಮೂಲದ ಮೂವರು ಯುವಕರು ಸಾವು.

Mon, 25 Apr 2022 04:37:56  Office Staff   SO News

ಹೊಸದುರ್ಗ : ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅಜ್ಜಂಪುರ  ಸಂಭವಿಸಿದ ಭೀಕರ ಅಪಘಾತದಲ್ಲಿ ಹೊನ್ನಾವರ ಮೂಲದ ಮೂವರು ಯುವಕರು ಸಾವನ್ನಪ್ಪಿದ್ದಾರೆ.

ಭಾನುವಾರ  ಮುಂಜಾನೆ ಈ ಅಪಘಾತ ಸಂಭವಿಸಿದೆ. ಬೊಲೆರೊ ವಾಹನವು ಹುಣಸೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸೇರಿ ಮೂವರು ಮೃತಪಟ್ಟಿದ್ದು ಓರ್ವ  ಗಾಯಗೊಂಡಿದ್ದಾನೆ.

ಹೊನ್ನಾವರ ತಾಲ್ಲೂಕಿನ ಕರ್ಕಿಯ ವಿನಾಯಕ (30),  ಶ್ರೀಧರ ನಾಯ್ಕ(29) ಜೀವನ್ ಕುಮಾರ್ (21) ಮೃತ ದುರ್ದೈವಿಗಳಾಗಿದ್ದಾರೆ.

ಹೊನ್ನಾವರದಿಂದ ಯುವಕರು ಬೊಲೇರೋ ವಾಹನದಲ್ಲಿ  ಶಿವಮೊಗ್ಗ  ಮಾರ್ಗವಾಗಿ ತುಮಕೂರಿಗೆ ಹೋಗುತ್ತಿದ್ದಾಗ ಈ  ಅಪಘಾತ ಸಂಭವಿಸಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Share: