ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಛತ್ತೀಸ್‌ಗಡದಿಂದ 1.50 ಲಕ್ಷ ಮೆಟ್ರಿಕ್ ಟನ್ ಅಕ್ತಿ ಲಭ್ಯ: ಸಿಎಂ

ಛತ್ತೀಸ್‌ಗಡದಿಂದ 1.50 ಲಕ್ಷ ಮೆಟ್ರಿಕ್ ಟನ್ ಅಕ್ತಿ ಲಭ್ಯ: ಸಿಎಂ

Sun, 18 Jun 2023 12:40:01  Office Staff   Vb

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್‌ಗಡ ರಾಜ್ಯದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ. ಆದರೆ, ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ನಗರದ ಶಕ್ತಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ತೆಲಂಗಾಣ ರಾಜ್ಯದ ಮುಖ್ಯಮಂತ್ರಿಯೊಂದಿಗೆ ನಾನೇ ಖುದ್ದಾಗಿ ದೂರವಾಣಿಯಲ್ಲಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಆಂಧ್ರ ಪ್ರದೇಶದೊಂದಿಗೆ ಮಾತನಾಡಲು ಸೂಚನೆ ನೀಡಿದ್ದೇನೆ' ಎಂದು ಸ್ಪಷ್ಟಪಡಿಸಿದರು.

'ರಾಜ್ಯದಲ್ಲೇ ಅಲ್ಲಿ ಲಭ್ಯವಿದೆ. ಆದರೆ, ಕಮಿಷನ್ ಆಮಿಷಕ್ಕೆ ಹೊರರಾಜ್ಯ ಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ' ಎಂಬ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ರಾಜ್ಯದಲ್ಲಿಯೇ ಅಕ್ಕಿ ದೊರೆಯುವುದಾದರೆ ಅವರು ಅಲ್ಲಿ ಕೊಡಿಸಲಿ. ವಿಜಯೇಂದ್ರರ ಮಿಲ್‌ನಲ್ಲಿ ಅಲ್ಲಿ ಲಭ್ಯವಿದ್ದರೆ ತಿಳಿಸಲಿ' ಎಂದು ತಿರುಗೇಟು ನೀಡಿದರು.


Share: