ಕಾರವಾರ : ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ಪರಿಧಿಗೆ ಒಳಪಡುವ ಗ್ರಾಹಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಸಂವಾದ ನಡೆಸಿದೆ.
ವಿಜಯಕುಮಾರ್ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿಗಳು ಸಂವಾದ ನಡೆಸಿರುವ ಬಗ್ಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಜುಲೈ 07 ರಂದು ಸಂಜೆ 6:00 ಗಂಟೆಯಿಂದ 6:30 ವರೆಗೆ ಪ್ರಸಾರ ಮಾಡಲಾಗುತ್ತಿದೆ. ಪಕ್ಷಕಾರರು, ವಕೀಲರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.