ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜೂನ್ 21 ರಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಜೂನ್ 21 ರಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Fri, 16 Jun 2023 03:38:30  Office Staff   SO News

ಕಾರವಾರ: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಕಾಜುಭಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಕಾರ್ಯಕ್ರಮದ ಉದ್ಘಾಟಣೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ನೆರವೇರಿಸಲಿದ್ದಾರೆ.
 
     ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ತೀರ್ಮಾನಿಸಲಾಯಿತು. ಆಯುಷ್ ಇಲಾಖೆ ಉತ್ತರಕನ್ನಡ, ಸ್ಥಳಿಯ ರೊಟರಿ ಸಂಸ್ಥೆ, ಲಯನ್ನ ಸಂಸ್ಥೆ, ರೋಟರಿ ಸಿ ಸೈಡ ಸಂಸ್ಥೆ, ಪತಂಜಲಿ ಯೋಗ ಸಂಸ್ಥೆ, ನೆಹರು ಯುವ ಕೇಂದ್ರ, ರೆಡ್ ಕ್ರಾಸ ಸಂಸ್ಥೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ ಕಾರವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಮತ್ತಿತರ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 6-30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಸತೀಶ ಸೈಲ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ  ಅಂಗವಾಗಿ ಜೂನ್ 19ರಂದು ಬೆಳಿಗ್ಗೆ 10-30
ಘಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿವರೆಗೆ ಯೋಗ ಜಾಥಾ ನಡೆಸಲಾಗುವುದು. ಸಾರ್ವಜನಿಕರು 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿ ಲಲಿತಾ ಶೆಟ್ಟಿ ಕೋರಿದ್ದಾರೆ.


Share: