ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ತೀವ್ರ ಉಸಿರಾಟದ ಸೋಂಕು: ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ

ತೀವ್ರ ಉಸಿರಾಟದ ಸೋಂಕು: ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ

Sun, 25 Sep 2022 22:39:19  Office Staff   so news


ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಉಸಿರಾಟದ ಬೆಂಬಲ ಸ್ಥಿತಿಯಲ್ಲಿ ಅವರಿದ್ದು ಉಳಿದಂತೆ ಆರೋಗ್ಯವಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಗಮನಿಸುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಕೃಷ್ಣ ಅವರಿಗೆ ಚಿಕಿತ್ಸೆ ನೀಡುವ ತಂಡದಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಸತ್ಯನಾರಾಯಣ ಮೈಸೂರು ಮತ್ತು ವಿಭಾಗದ ಮುಖ್ಯಸ್ಥ ಡಾ ಸುನೀಲ್ ಕಾರಂತ್ ಕೂಡ ಇದ್ದಾರೆ.
 


Share: