ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ದಕ್ಷಿಣ ಕನ್ನಡದ ಸುರತ್ಕಲ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ

ದಕ್ಷಿಣ ಕನ್ನಡದ ಸುರತ್ಕಲ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ

Fri, 29 Jul 2022 06:28:48  Office Staff   SO NEWS

ಮಂಗಳೂರು;ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿ ಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ತಲವಾರು ದಾಳಿ ಗುರುವಾರ ಸಂಜೆ ನಡೆದಿದೆ.ಜಿಲ್ಲೆಯ ಮಂಗಳೂರು ನಗರದ ಹೊರ ವಲಯದ ಸುರತ್ಕಲ್‌ಗೆ ಅಂಗಡಿಗೆಂದು ಬಂದಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಮಾಡಲಾಗಿದೆ.
ದಾಳಿಗೊಳಗಾದ ಯುವಕನನ್ನು ಸುರತ್ಕಲ್‌ನ ಮಂಗಳಪೇಟೆ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಚಪ್ಪಲಿ ಖರೀದಿಗೆಂದು ಬಂದಿದ್ದ ಫಾಝಿಲ್‌ ಮೇಲೆ ಜನರ ಮುಂದೆಯೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಫಾಝಿಲ್ ಮೇಲೆ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳ ದಾಳಿಯಿಂದಾಗಿ ಗಾಯಗೊಂಡಿದ್ದ ಯುವಕ ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸುರತ್ಕಲ್ ಬೀಜೆಶ್‌ ಎಂಬ ಜವಳಿ ಅಂಗಡಿಯ ಮುಂಭಾಗ ಈ ಘಟನೆ ನಡೆದಿದ್ದು,ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ 

 


Share: