ಕಾರವಾರ : ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಿದ್ದರಿಂದ ಜುಲೈ 5ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದು, ಬುಧವಾರ ಬೆಳಿಗ್ಗೆವರೆಗೆ ಭಾರಿ ಮಳೆ ಬೀಳುವ ಸೂಚನೆಯ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೂಡ ಡಿಸಿ ಮುಲೈ ಮುಗಿಲನ್ ರಜೆ ಡಿಕ್ಲೆರ್ ಮಾಡಿದ್ದಾರೆ.