ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ಇಬ್ಬರ ಸಾವು

Sun, 26 Jun 2022 06:10:27  Office Staff   Indian Express

ಬೆಂಗಳೂರು: ನೆಲಮಂಗಲ ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮತ್ತು ಆಕೆಯ ಸಹೋದರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
    
ಮಂಡ್ಯ ಮೂಲದ ಶಶಿಕಲಾ (35) ಮತ್ತು ರಂಜನ್ (26) ಮೃತ ವ್ಯಕ್ತಿಗಳಾಗಿದ್ದಾರೆ. ಸತ್ಯಮೂರ್ತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಕೌಂಟೆಂಟ್ ಆಗಿದ್ದ ಮೃತ ಶಶಿಕಲಾ ಅವರು, ತಮ್ಮ ಮಗಳನ್ನು ಶಾಲೆಗೆ ಸೇರಿಸಲು ಮಂಗಳೂರಿಗೆ ಕರೆದೊಯ್ದಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆ ಎನ್‌ಎಚ್ 75 ರ ಕುಣಿಗಲ್ ಕ್ರಾಸ್‌ನಲ್ಲಿ ಅಪಘಾತ ಸಂಭವಿಸಿದೆ. ಕಾರನ್ನು ವೇಗವಾಗಿ ಚಲಿಸುತ್ತಿದ್ದ ಸತ್ಯಮೂರ್ತಿ ಅವರು, ನಿಂತಿದ್ದ ಟ್ರಕ್ ಅನ್ನು ಗಮನಿಸದೇ ರಭಸದಿಂದ ಡಿಕ್ಕಿ ಹೊಡೆದಿದ್ದಾರೆಂದು ಹೇಳಿದ್ದಾರೆ.

ಘಟನೆ ಬಳಿಕ ಟ್ರಕ್ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಪಾರ್ಕಿಂಗ್ ಲೈಟ್ ಆನ್ ಮಾಡದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹುಡುಕಾಟ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ


Share: