ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ನೂತನ ಲೋಕಾಯುಕ್ತರಿಂದ ಇಂದು ಪ್ರಮಾಣ

ನೂತನ ಲೋಕಾಯುಕ್ತರಿಂದ ಇಂದು ಪ್ರಮಾಣ

Thu, 16 Jun 2022 05:32:04  Office Staff   Vb

ಬೆಂಗಳೂರು: ರಾಜ್ಯದ ನೂತನ ಲೋಕಾ ಯುಕ್ತರಾಗಿ ಹೈಕೋರ್ಟಿನ ನಿವೃತ್ತ್  ನ್ಯಾಯಮೂರ್ತಿ ಭೀಮನಗೌಡ ಸಂಗನ ಗೌಡ ಪಾಟೀಲ್ ಅವ ರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದು, ಬುಧವಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಸ್ತುತ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ಲೋಕಾಯುಕ್ತ ಹುದ್ದೆಗೆ ನೇಮಕ ಮಾಡುವಂತೆ ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಮಂಡಲ ಉಭಯ ಸದನಗಳ ವಿಪಕ್ಷ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಟೀಲ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.

ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಜೂ.15ರಂದು ಬೆಳಗ್ಗೆ 9:45ಕ್ಕ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕದ ನೂತನ  ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಅವರಿಗೆ ರಾಜ್ಯಪಾಲ ಗೆಹ್ಲೋಟ್ ಅವರು ಪ್ರಮಾಣವಚನವನ್ನು ಬೋಧಿಸಲಿದ್ದಾರೆ.


Share: