ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ನ್ಯಾಯವಾದಿಗೆ ಹಲ್ಲೆ ಪ್ರಕರಣ: ಪೂಂಜಾಲಕಟ್ಟೆ ಎಸ್ಸೈ ಅಮಾನತು

ನ್ಯಾಯವಾದಿಗೆ ಹಲ್ಲೆ ಪ್ರಕರಣ: ಪೂಂಜಾಲಕಟ್ಟೆ ಎಸ್ಸೈ ಅಮಾನತು

Tue, 13 Dec 2022 09:22:16  Office Staff   Vb

ಮಂಗಳೂರು: ನ್ಯಾಯವಾದಿ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೆ ಸುತೇಶ್‌ರನ್ನು ಅಮಾನತು ಮಾಡಿ ಪುಮ ವಲಯದ ಡಿಐಜಿ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿಯವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ವಕೀಲರು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿದ್ದರು.

ಹಲ್ಲೆ ನಡೆಸಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಸೆ ಸುತೇಶ್‌ ಅವರನ್ನು ದ.ಕ. ಜಿಲ್ಲಾ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಕೀಲರು ಧರಣಿ ತೀವ್ರಗೊಳಿಸಿದ್ದರು. ಅಲ್ಲದೆ ರಾಜ್ಯ ಗೃಹ ಸಚಿವರಿಗೂ ಮನವಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಆ ಹಿನ್ನೆಲೆಯಲ್ಲಿ ಇದೀಗ ಅವರನ್ನು ಪಶ್ಚಿಮ ವಲಯದ ಡಿಐಜಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


Share: