ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಪೊಲೀಸ್ ಠಾಣೆಯೊಳಗೆ ವೀಡಿಯೊ ಚಿತ್ರೀಕರಣ ಅಪರಾಧವಲ್ಲ: ಬಾಂಬೆ ಹೈಕೋರ್ಟ್

ಪೊಲೀಸ್ ಠಾಣೆಯೊಳಗೆ ವೀಡಿಯೊ ಚಿತ್ರೀಕರಣ ಅಪರಾಧವಲ್ಲ: ಬಾಂಬೆ ಹೈಕೋರ್ಟ್

Sun, 30 Oct 2022 08:47:07  Office Staff   Vb

ಮುಂಬೈ: ಅಧಿಕೃತ ರಹಸ್ಯಗಳ ಕಾಯ್ದೆ (ಒಎಸ್‌ಎ)ಯಡಿ ಪೊಲೀಸ್ ಠಾಣೆಯು ನಿಷೇಧಿತ ಸ್ಥಳವಲ್ಲ, ಹೀಗಾಗಿ ಪೊಲೀಸ್ ಠಾಣೆಯೊಳಗೆ ವೀಡಿಯೊ ಚಿತ್ರೀಕರಣ ಅಪರಾಧವಾಗುವುದಿಲ್ಲ ಎಂದು ಬಾಂಬೆ ಉಚ್ಚ ನ್ಯಾಯಾಲಯದ ನಾಗುರ ಪೀಠವು ಅಭಿಪ್ರಾಯಿಸಿದೆ.

2018, ಮಾರ್ಚ್‌ನಲ್ಲಿ ಪೊಲೀಸ್ ಠಾಣೆಯೊಳಗೆ ವೀಡಿಯೊ ಚಿತ್ರೀಕರಿಸಿದ್ದಕ್ಕಾಗಿ ಒಎಸ್‌ಎ ಅಡಿ ರವೀಂದ್ರ ಉಪಾಧ್ಯಾಯ ಎನ್ನುವವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಮನೀಷ ಪಿತಳೆ ಮತ್ತು ವಾಲ್ಮೀಕಿ ಮೆನೆಝಿಸ್ ಅವರ ಪೀಠವು ಈ ವರ್ಷದ ಜುಲೈನಲ್ಲಿ ರದ್ದುಗೊಳಿಸಿದೆ.

ನಿಷೇಧಿತ ಸ್ಥಳಗಳಲ್ಲಿ ಬೇಹುಗಾರಿಕೆಗೆ ಸಂಬಂಧಿಸಿದ ಕಾಯ್ದೆಯ 3 ಮತ್ತು 2(8) ಕಲಮ್‌ಗಳನ್ನು ತನ್ನ ಆದೇಶದಲ್ಲಿ ಪ್ರಸ್ತಾಪಿಸಿರುವ ಪೀಠವು, ಕಾಯ್ದೆಯಲ್ಲಿ ಪೊಲೀಸ್ ಠಾಣೆಯನ್ನು ನಿಷೇಧಿತ ಸ್ಥಳವೆಂದು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿಲ್ಲ ಎಂದು ಬೆಟ್ಟು ಮಾಡಿದೆ.


Share: