ಧಾರವಾಡ : ನಗರದ ಜವಾಹರ ನವೋದಯ ವಿದ್ಯಾಲಯ ಶಾಲೆ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಧಾರವಾಡದ ಸಿಬಿಟಿ, ಆರ್.ಎನ್.ಶೆಟ್ಟಿ ಪ್ರೌಢಶಾಲೆ ಹಾಗೂ ರಾಧಾಕೃಷ್ಣ ನಗರದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಪೋಷಣ ಅಭಿಯಾನದ ಅಂಗವಾಗಿ ಜವಾಹರ ನವೋದಯ ಶಾಲೆಯ ವಿದ್ಯಾರ್ಥಿಗಳು ಬುಧವಾರ ಪೋಷಣಾ ಶಿಕ್ಷಣ ಬೀದಿ ನಾಟಕ ಪ್ರದರ್ಶಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ ಮಾತನಾಡಿ, ವಿಟಮಿನ್‍ಯುಕ್ತ ಆಹಾರ ಪದಾರ್ಥಗಳನ್ನು ಮನೆಯಲ್ಲಿ ತಯಾರಿಸಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಬೇಕು. ಅಪೌಷ್ಠಿಕ ಆಹಾರಗಳ ಕುರಿತು ಮಕ್ಕಳು, ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಶಹರ ಕ್ಷೇತ್ರಶಿಕ್ಷಣಾಧಿಕಾರಿ ಗಿರೀಶ್ ಪದಕಿ, ಗ್ರಾಮೀಣ ಕ್ಷೇತ್ರಶಿಕ್ಷಣಾಧಿಕಾರಿ ಉಮೇಶ್ ಬೊಮ್ಮಕ್ಕನವರ, ಶಹರದ ಸಮನ್ವಯಾಧಿಕಾರಿ ಮಂಜುನಾಥ್ ಅಡವೇರ, ಕ್ಯಾರಕೊಪ್ಪ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯೆ ಹೇಮಲತಾ.ಯು, ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರದ ಸಾಂಸ್ಕøತಿಕ ಸಂಘಟಕ ಯಮನಪ್ಪ ಜಾಲಗಾರ, ಗ್ರಂಥಪಾಲಕ ರಾಘವೇಂದ್ರ.ಆರ್, ಶಿಕ್ಷಕಿ ಉಮಾದೇವಿ ಮತ್ತಿತರರು ಇದ್ದರು.