ಶಿರಸಿ : ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಾಲಕನೋರ್ವ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ. ಶನಿವಾರ ಸಂಜೆ ಈ ಘಟನೆ ನಡೆದಿದೆ.
ಶಾಜಿದ್ ಆಸ್ಪಕ್ ಆಲಿ(16) ಮೃತಪಟ್ಟ ಬಾಲಕ. ಬನವಾಸಿಯ ಜಯಂತಿ ಪ್ರೌಢಶಾಲೆ ಮೈದಾನದಲ್ಲಿ ಆಟವಾಡುತ್ತಿದ್ದ್ದಾಗ ಬಾಲಕನಿಗೆ ಸಿಡಿಲು ಬಡಿದಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗದೆ ಮೃತಪಟ್ಟಿದ್ದಾನೆ. ಮೀನು ಮಾರ್ಕೆಟ್ ರಸ್ತೆಯ ನಿವಾಸಿಯಾಗಿದ್ದು ತನ್ನ ಗೆಳೆಯರೊಂದಿಗೆ ಎಂದಿನಂತೆ ಮೈದಾನದಲ್ಲಿ ಆಟವಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಮಧ್ಯಾಹ್ನದಿಂದ ಈ ಭಾಗದಲ್ಲಿ ಮಳೆಯಾಗಿದ್ದು, ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.