ಅಂಕೋಲಾ : ಬಾಳೆಗುಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಸ್ ಹಾಗೂ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಭವಿಸಿದೆ.
ತಮಿಳುನಾಡು ನೊಂದಣಿ ಹೊಂದಿದ ಕಾರು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಏಕಾಎಕಿ ರಸ್ತೆ ಬಿಟ್ಟು ಡಿವೈಡರ್ ದಾಟಿ ಎದುರಿನಿಂದ ಬರುವ ರಸ್ತೆಗೆ ಸಾಗಿ ಅಲ್ಲಿ ಅಂಕೋಲಾದಿಂದ ಹುಬ್ಬಳ್ಳಿ ಹೋಗುವ ಬಸ್ ಗೆ ಢಿಕ್ಕಿ ಹೊಡೆದಿದೆ.ಈ ಸಂದರ್ಭದಲ್ಲಿ ಸ್ಥಳದಲ್ಲಿಯೇ ತಮಿಳುನಾಡು ಮೂಲದ ನಾಲ್ವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಾಳುವನ್ನು ಕಾರವಾರ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಯಲಾಗಿದೆ.
ಈ ಘಟನೆ ಸ್ಥಳಕ್ಕೆ ಅಂಕೋಲಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.