ಬೆಂಗಳೂರು : ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಸಂಕಷ್ಟ ಎದುರಾಗಿದ್ದು, ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ರಾವ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು, ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ದೇಶಿಸಿದ್ದಾರೆ.
ಟೀಕಿಸುವ ಭರದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ʼಅರ್ಧ ಪಾಕಿಸ್ತಾನ ಇದೆʼ ಎಂದು ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಹೀಗಾಗಿ ತಬು ರಾವ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿ ಪತ್ರಿಕೆ ವರದಿ ಸೇರಿದಂತೆ, ವಸ್ತುಗಳನ್ನು ಕೋರ್ಟ್ ಗೆ ಸಾಕ್ಷಿ ನೀಡಿದ್ದರು. ಇದನ್ನು ಪರಿಗಣಿಸಿರುವ ನ್ಯಾಯಾಲಯ ಯತ್ನಾಳ್ ಗೆ ಸಮನ್ಸ್ ಜಾರಿಗೊಳಿಸಿದೆ. ಅರ್ಜಿದಾರ ಪರ ಸೂರ್ಯ ಮುಕುಂದರಾಜ್ , ಸಂಜಯ್ ವಕಾಲತ್ತು ವಹಿಸಿದ್ದರು.