ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬೆಂಗಳೂರು: ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಾತಿ ಪ್ರಾರಂಭ

ಬೆಂಗಳೂರು: ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಾತಿ ಪ್ರಾರಂಭ

Tue, 22 Aug 2023 02:32:53  Office Staff   S O news

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2023-24ರ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ  ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಎ, ಎಂ.ಎಸ್ಸಿ. ಎಂ.ಬಿ.ಎ., ಎಂ.ಎಸ್.ಡಬ್ಲ್ಯೂ, ಹಾಗೂ ಎಂ.ಸಿ.ಎ. ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಯುಜಿ ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸುಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಬೆಂಗಳೂರು ಪ್ರಾದೇಶಿಕ ಕೇಂದ್ರ – 01ರಲ್ಲಿ  ಪ್ರವೇಶಾತಿ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕ ವಾಗಿದೆ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‍ಸೈಟ್ www.ksoumysuru.ac.in  ಅನ್ನು ಸಂಪರ್ಕಿಸಬಹುದು.     ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿಯಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕರಾದ ದಿಲೀಪ ಡಿ. ಅವರು ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ 080-26603664 ಹಾಗೂ 9844965515 ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
 


Share: