ಬೆಂಗಳೂರು: ದ್ವಿತೀಯ ಪಿಯು 2021-22ನೇ ಸಾಲಿನ ತರ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ಪರೀಕ್ಷೆಗಳು ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ನಡೆದಿದ್ದು, ಎರಡು ವಿಷಯಗಳಲ್ಲಿ ನೋಂದಣಿಯಾದ 2,28,073 ವಿದ್ಯಾರ್ಥಿಗಳ ಪೈಕಿ 11,379 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.
ತರ್ಕಶಾಸ್ತ್ರ ವಿಷಯದಲ್ಲಿ 620 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 68 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ವ್ಯವಹಾರ ಅಧ್ಯಯನ ವಿಷಯದಲ್ಲಿ 2,27,453 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 11,311 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ತರ್ಕಶಾಸ್ತ್ರ ವಿಷಯದಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದ 61 ವಿದ್ಯಾರ್ಥಿಗಳು, ಮರುಪರೀಕ್ಷೆ ತೆಗೆದುಕೊಂಡಿದ್ದ 15 ವಿದ್ಯಾರ್ಥಿಗಳು ಹಾಗೂ ಖಾಸಗಿಯಾಗಿ ನೋಂದಣಿಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವ್ಯವಹಾರ ಅಧ್ಯಯನ ವಿಷಯದಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಲ್ಲಿ 7,795 ವಿದ್ಯಾರ್ಥಿಗಳು, ಖಾಸಗಿಯಾಗಿ ನೋಂದಣಿಯಾಗಿದ್ದ 475 ವಿದ್ಯಾರ್ಥಿಗಳು, ಮರುಪರೀಕ್ಷೆ ತೆಗೆದುಕೊಂಡಿದ್ದ 2,492 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಬೆಂಗಳೂರು ಜಿಲ್ಲೆಯೊಂದರಲ್ಲೇ 1,579 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ತುಮಕೂರು 739, ಕೋಲಾರ 592, - ಮೈಸೂರು 543, ದಾವಣಗೆರೆ 516, ಹಾಸನ ಜಿಲ್ಲೆಯಲ್ಲಿ 421 - ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ - ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.