ಭಟ್ಕಳ : ಬೆಳಕೆಯ ಸರಕಾರಿ ಪ್ರೌಢಶಾಲೆಯಲ್ಲಿ ಎನ್ಎಸ್ಎಸ್ ಘಟಕ ಹಾಗೂ ವನಸಿರಿ ಇಕೋ ಕ್ಲಬ್ ಸಹಯೋಗದಲ್ಲಿ ಪರಿಸರ ದಿನಾಚರಣೆಯ ಆಚರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊನ್ನಪ್ಪ ನಾಯ್ಕ ಶಾಲೆಯ ಆವರಣದಲ್ಲಿ ಗಿಡವನ್ನು ನೆಟ್ಟು ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ನಮ್ಮ ಹೊಣೆ ಮತ್ತು ಜವಾಬ್ಧಾರಿಯು ಕೂಡಾ ಹೌದು. ವಿದ್ಯಾರ್ಥಿಗಳು ಪರಿಸರದ ಬಗ್ಗೆ ಅಧ್ಯಯನ ಮಾಡಬೇಕು ಎಂದು ಹೇಳಿದರು
ವಿದ್ಯಾರ್ಥಿಗಳಿಗೆ ಇರುವುದೊಂದೇ ಭೂಮಿ ಭೂಮಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮಾನವನ ದುರಾಸೆಯಿಂದ ಭೂಮಾಲಿನ್ಯ ಮಿತಿ ಮಿರುತ್ತಿದೆ ಭೂಮಿಯ ತಾಪಮಾನ ಹೆಚ್ಚಾಗಿದೆ. ಗಿಡ ನೆಡುವುದರಿಂದ ಪರಿಸರ ಮಾಲಿನ್ಯ ನಿಯಂತ್ರಿಸ ಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಪ್ರಕಾಶ ಶಿರಾಲಿ ಸ್ವಾಗತಿಸಿದರು. ರಜನಿ ಶೆಟ್ಟಿ ವಂದಿಸಿದರೆ, ಸಿ ಎಸ್ ಬೈಲೂರು ಕಾರ್ಯಕ್ರಮ ನಿರೂಪಿಸಿದರು.