ಭಟ್ಕಳ:ತಾಲೂಕಿನ ಸರ್ಕಾರಿ ಆಸ್ಪತ್ರೆ ಯಲ್ಲಿ ಸುಮಾರು 60 ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು
ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು ಯಾರಿಗಾದರೂ ವ್ಯಕ್ತಿಯ ಸುಳಿವು ಕಂಡು ಬಂದಲ್ಲಿ ಮಾಹಿತಿ ನೀಡಲು ಕೋರಲಾಗಿದೆ.
ಈ ವ್ಯಕ್ತಿಯು ರಸ್ತೆಯ ಬದಿಯಲ್ಲಿ ಬಿದ್ದವನನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದು ಚಿಕಿತ್ಸೆ ಫಲಕಾರಿ ಯಾಗದೆ ಮೃತ ಪಟ್ಟಿರುತ್ತಾರೆ.
ಮೃತಪಟ್ಟ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ ಮೃತನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಭಟ್ಕಳ ನಗರ ಠಾಣೆಯ ಫೋನ್ ನಂಬ್ರ 08385 226333
ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಕೋರಿದ್ದಾರೆ.